ಹಾಸನ, ಡಿಸೆಂಬರ್ 31: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷರು ಹಾಗೂ ಯೋಗ ಗುರುಗಳಾದ ಹೆಚ್.ಬಿ.ರಮೇಶ್ ಅವರು ಅನಾರೋಗ್ಯ ಪೀಡಿತರಾಗಿ ವಿಶ್ರಾಂತಿ ಪಡೆಯುತ್ತಿರುವ ಹಿನ್ನಲೆಯಲ್ಲಿ ಪಶು ಸಂಗೋಪನೆ ಮತ್ತು ರೇಷ್ಮೆ ಖಾತೆ ಸಚಿವರು ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಎ.ಮಂಜು ಅವರು ಹೆಚ್.ಬಿ.ರಮೇಶ್ ಅವರ ಮನೆಗೆ ತೆರಳಿ ಅವರ ಯೋಗಕ್ಷೇಮವನ್ನು ವಿಚಾರಿಸಿದರು.
ಆದಷ್ಟು ಶೀಘ್ರ ಗುಣಮುಖರಾಗಿ ಸಮಾಜಕ್ಕೆ ಮತ್ತಷ್ಟು ಸೇವೆ ಸಲ್ಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಹಾರೈಸಿದರು.(ಫೋಟೋ ಲಗತ್ತಿಸಿದೆ)

No comments:
Post a Comment